ಬೆಂಗಳೂರು,ಜು.16 : ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು, ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.
ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಶೇಷ ವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.