ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಸಂಚಾರ ಸ್ಥಗಿತ

Kranti Deepa

ಚಿಕ್ಕಮಗಳೂರು, ಅ.09 :ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ಗಂಟೆಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹಿಂದಕ್ಕೆ ಹೋಗದೇ ಮುಂದಕ್ಕೆ ಹೋಗಲು ಆಗದೇ ವಾಹನ ಸವಾರರು ತೀವ್ರ ಪರದಾಡುತ್ತಿದ್ದಾರೆ.

ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಸಂಜೆ ಕಳೆದ ಎರಡು ಗಂಟೆಯಿಂದ ನಿರಂತರವಾಗಿ ಎಡಬಿಡದೇ ಮಳೆಯಾಗುತ್ತಿದೆ. ಈ ಹಿನ್ನೆಲೆ ಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದಿದೆ. ಭಾರೀ ಮಳೆ ಯಿಂದಾಗಿ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿ ಸುವ ಚಾರ್ಮಾಡಿ ಘಾಟಿಯಲ್ಲಿ  ಟ್ರಾಫಿಕ್ ಜಾಮ್ ಆಗಿದೆ.

Share This Article
";