ಬೆಂಗಳೂರು,ಅ.15: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿ ಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿ ಸುವ ಕುರಿತು ಡಿಸಿ ಜಗದೀಶ್ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಅಕ್ಟೋಬರ್ ೧೬ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಕಾರಿ ಜಗದೀಶ್ ಸೂಚಿಸಿದ್ದಾರೆ.