ಮುಂದಿನ 5 ವರ್ಷ ನಾನೇ ಸಿಎಂ

Kranti Deepa
ಮೈಸೂರು,ಅ.03:ನನ್ನ ಆತ್ಮಸಾಕ್ಷಿ ಪ್ರಕಾರ ನಾನು ನಡೆಯುತ್ತಿದ್ದೇನೆ, ಆತ್ಮಸಾಕ್ಷಿಗೆ ಅನುಗುಣವಾಗಿ ನಾವು ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ನ್ಯಾಯಾ ಲಯಗಳಿಗಿಂತಲೂ ಆತ್ಮಸಾಕ್ಷಿಯ ನ್ಯಾಯಾ ಲಯ ದೊಡ್ಡದು. ಸತ್ಯಕ್ಕೆ ಯಾವಾಗಲೂ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗುರವಾರ ಮೈಸೂರು ದಸರಾ 2024ನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾಯಿತ ಸರ್ಕಾರವನ್ನು ಕಿತ್ತಾಕುವುದು ಪ್ರಜಾಪ್ರಭುತ್ವ ವಿರೋ ಕೆಲಸ. ರಾಜ್ಯದ ಜನರ ಆಶೀರ್ವಾದದಿಂದ ನಾವು 136 ಸ್ಥಾನ ಗೆದ್ದಿದ್ದೇವೆ. 5 ವರ್ಷಗಳ ಅಭಿವೃದ್ಧಿ ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ದೇವರಾಜ ಅರಸು ಬಿಟ್ಟರೆ ಸಿಎಂ ಆಗಿ 5 ವರ್ಷ ಪೂರೈಸಿದ್ದು ಸಿದ್ದರಾಮಯ್ಯ ಮಾತ್ರ ಎಂದು ಹೇಳಿರುವ ಜಿಟಿ ದೇವೇಗೌಡ ಮುಡಾದ ಸದಸ್ಯರಾಗಿದ್ದರು, ಅವರಿಗೆ ಸತ್ಯ ಗೊತ್ತಿದೆ. ಅದಕ್ಕೇ ಅವರು ಇಂದು ಬೇರೆ ಪಕ್ಷದಲ್ಲಿದ್ದು ಕೊಂಡು ಸತ್ಯವನ್ನೇ ಹೇಳುವ ಕೆಲಸ ಮಾಡಿದ್ದಾರೆ ಎಂದರು.
ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಆಗಲ್ಲ. ಜನರು, ಚಾಮುಂಡಿ ಆಶೀರ್ವಾದಿಂದ 2ನೇ ಬಾರಿ ಸಿಎಂ ಆಗಿದ್ದೇನೆ, ಸತ್ಯಕ್ಕೆ ಯಾವಾಗಲೂ ಜಯ ಸಿಗುತ್ತದೆ, ಈ ರಾಜ್ಯದ ಜನತೆಯ ಪ್ರೀತಿ, ಆಶೀರ್ವಾದ ಇರುವವರೆಗೆ ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಮೈಸೂರು ದಸರಾ ರೋಮಾಂಚನ:
ಮೈಸೂರು ದಸರಾ ಅಂದರೆ ಒಂದು ರೀತಿ ರೋಮಾಂಚನ ಮತ್ತು ಹರ್ಷ. ಕಳೆದ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡಿದ್ದೆವು. ಈ ಬಾರಿ ಅದ್ದೂರಿಯಾಗಿ ನಾಡಹಬ್ಬವಾಗಿ ಮೈಸೂರು ದಸರಾ ಆಚರಣೆಗೆ ನಿರ್ಧಾರ ಮಾಡುತ್ತಿದ್ದೇವೆ. ಈ ಬಾರಿ ರಾಜ್ಯದಲ್ಲಿ ಶೇ 98.99 ರಷ್ಟು ಬಿತ್ತನೆ ಕಾರ್ಯ ಆಗಿದೆ. ನಮ್ಮ ನಿರೀಕ್ಷೆಗಿಂತ ಹೆಚ್ಚು ಬೆಳೆ ಬೆಳೆಯಲೆಂದು ಪ್ರಾರ್ಥನೆ ಮಾಡುತ್ತೇನೆ ಎಂದರು.
ಈ ವರ್ಷ ಸಾಕಷ್ಟು ಮಳೆಯಾಗಿದೆ. ಎಲ್ಲ ನದಿಗಳು, ಜಲಾಶಯಗಳು ಬಹುತೇಕ ತುಂಬಿವೆ. ಮಳೆ ಬೆಳೆ ಸರಿಯಾಗಿ ಆದರೆ ಮಾತ್ರ ಜನರು ಸುಖ ಶಾಂತಿ ನೆಮ್ಮದಿಯಿಂದ ಬಾಳಲು ಸಾಧ್ಯ. ರೈತರ ಮುಖದಲ್ಲಿ ಮಂದಹಾಸ ಕಾಣಲು ಸಾಧ್ಯ, ಸಾಮಾನ್ಯ ಜನತೆಗೆ ಸಂತೋಷ ಜೀವನ ಸಿಗಲಿ ಎಂದು ಚಾಮುಂಡಿ ದೇವಿಯನ್ನು ಪ್ರಾರ್ಥಿಸಿದ್ದೇನೆ ಎಂದರು.
ತಾಯಿ ಚಾಮುಂಡೇಶ್ವರಿ, ಜನರ ಆಶೀರ್ವಾದ, ಸರಕಾರದ ಮೇಲೆ ನನ್ನ ಮೇಲೆ ಇರುವವರೆಗೂ ನನ್ನ ಯಾರು ಏನೂ ಮಾಡಲು ಆಗಲ್ಲ. ಜಿಟಿಡಿಯವರೇ ನನ್ನ ಈ ಕ್ಷೇತ್ರದಲ್ಲಿ ಸೋಲಿಸಿದ್ದು. ಅದು ನನ್ನ ಕೈಯಾರೆ ಮಾಡಿಕೊಂಡ ಸೋಲಾಗಿತ್ತು.ನಾನು ಒಂಭತ್ತು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಚಾಮುಂಡೇಶ್ವರಿ ಕೃಪೆಯಿಂದ ಇಲ್ಲಿವರೆಗೆ ಇದ್ದೇನೆ.  ಮುಂದಿನ ಐದು ವರ್ಷಗಳ ಕಾಲ ಅಭಿವೃದ್ಧಿ ಮಾಡೇ ಮಾಡುತ್ತೇನೆ. ಹಿಂದೆ ದೇವರಾಜು ಅರಸು ಬಿಟ್ಟರೆ ಐದು ವರ್ಷ ಪೂರ್ಣವಾಗಿ ಆಡಳಿತ ಮಾಡಿದ್ದು ಮಾಡಿದ್ದು ಸಿದ್ದರಾಮಯ್ಯ ಮಾತ್ರ.  ಅದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ. ಜಿಟಿಡಿ ಬೇರೆ ಪಕ್ಷದಲ್ಲಿದ್ದರೂ ಸತ್ಯವಾದ ಮಾತು ಹೇಳಿದ್ದಾರೆ. ಸತ್ಯಮೇವ ಜಯತೇ ಸತ್ಯಕ್ಕೆ ಯಾವಾಗಲೂ ಜಯ. ಮುಡಾ ಪ್ರಕರಣದಲ್ಲಾಗಲಿ ರಾಜಕಾರಣದಲ್ಲಾಗಲಿ ನಾನು ಯಾವ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದರೆ ಇಷ್ಟು ಸುರ್ಘ ರಾಜಕಾರಣ ಮಾಡಲು ಆಗುತ್ತಿರಲಿಲ್ಲ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

Share This Article
";