ಬೆಂಗಳೂರು,ಜು.19 : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸುತ್ತಮುತ್ತ ಕಳೆದ ದಶಕಗಳಲ್ಲಿ ನಡೆದ ಅಸಹಜ ಸಾವುಗಳು ಎಂಬ ಹಣೆಪಟ್ಟಿ ಹೊತ್ತ ಪ್ರಕರಣಗಳ ಬಗ್ಗೆ ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ಪ್ರಕರಣಗಳ ಕುರಿತು ದೂರುದಾರನ ದೂರಿಗೆ ಸಂಬಂಸಿದಂತೆ ಈಗಾಗಲೇ ಪ್ರಾಥಮಿಕ ತನಿಖೆ ಆರಂಭವಾಗಿದೆ ಎಂದರು.
ದೂರಿಗೆ ಸಂಬಂಸಿದಂತೆ ಎಸ್‌ಐಟಿ ತನಿಖೆಗೆ ವಕೀಲರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ್ದೇನೆ. ಅಗತ್ಯಗಳನ್ನು ನೋಡಿಕೊಂಡು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದರು. ಪ್ರಾಥಮಿಕ ತನಿಖೆ ನಡೆಯುತ್ತಿರುವ ಮಧ್ಯೆಯೇ ಎಸ್‌ಐಟಿ ತನಿಖೆಗೆ ಒತ್ತಾಯಿಸಿದರೆ, ಪೊಲೀಸ್ ಇಲಾಖೆ ಇರುವುದು ಏಕೆ ಎಂದರು.