ಶಿವಮೊಗ್ಗ, ಜ.05: ಜ.07 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-20 ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
