ಜೂನ್ 7,8: ನಗರದಲ್ಲಿ ಕುಡಿಯುವ ನೀರಿಲ್ಲ

Kranti Deepa

ಶಿವಮೊಗ್ಗ, ಜೂ. 06: ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂನ್ 7 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.

ಪರಿಣಾಮವಾಗಿ, ಜೂನ್ 7 ಮತ್ತು ಜೂನ್ 8 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share This Article
";