ಬೆಂಗಳೂರು,ಮೇ .29 : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಇಂತಹ ಊಹಾಪೋಹಗಳು ಸರಿಯಲ್ಲ ಎಂದು ಜಾರಕಿಹೊಳಿ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂ ಮತ್ತು ರಾಹುಲ್ ಗಾಂ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ. ಅವರು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾವು ಸ್ವೀಕರಿಸುತ್ತೇವೆ ಎಂದರು.
