ಲಿಂಗನಮಕ್ಕಿ ಎಲ್ಲಾ ಗೇಟ್ ಓಪನ್

Kranti Deepa
ಸಾಗರ,ಅ.28: ಲಿಂಗನಮಕ್ಕಿ ಜಲಾಶಯದ   ಎಲ್ಲ ಗೇಟುಗಳನ್ನು ಗುರುವಾರ ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು  ಮೈ ದುಂಬಿ ಹರಿಯುತ್ತಿದೆ.
ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿದೆ. ಅದ್ದರಿಂದ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47,232  ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಒಟ್ಟು 32,138 ಕ್ಯೂಸೆಕ್ ಹೊರ ಹರಿವು ಇದೆ.
ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 0.40 ಅಡಿ ಏರಿಕೆಯಾಗಿದೆ. 1819  ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ 1817.70  ಅಡಿಯಷ್ಟಿದೆ.
ಲಿಂಗನಮಕ್ಕಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಜೋಗದ ಎಲ್ಲ ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತಿವೆ. ಸದ್ಯಕ್ಕೆ ಜೋಗ ಜಲಪಾತದ ಚಹರೆಯೇ ಬದಲಾಗಿದೆ

Share This Article
";