ಉತ್ತರ ಪ್ರದೇಶ,ಫೆ .05 : ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿ ಗಂಗಾ ಆರತಿ ನೆರವೇರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಗಂಗಾ ಆರತಿ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು.
ರುದ್ರಾಕ್ಷಿ ಮಾಲೆ ಹಿಡಿದು ಗಂಗಾ ನದಿಯ ಸಂಗಮ್ ಘಾಟ್ ನಲ್ಲಿ ಪ್ರಧಾನಿ ಮೋದಿ ಜಪ ಮಾಡಿದ್ದಾರೆ. ಪ್ರಧಾನಿ ಮೋದಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದಾರೆ. ನಂತರ ಗಂಗಾ ಮಾತೆಗೆ ಮತ್ತು ಸೂರ್ಯ ದೇವನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.