ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

Kranti Deepa

ಸೊರಬ,ನ. 29 : ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಬೋವಿ ಕಾಲೋನಿ ನಿವಾಸಿ ದುರ್ಗಪ್ಪ ಬೋವಿ ಎಂಬುವವರಿಗೆ ಸೇರಿದ ಬೈಕ್ ಗೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನೆರೆ ಮನೆಯ ನಿವಾಸಿಗಳು
ಬೆಂಕಿಯ ತೀವ್ರತೆ ಗಮನಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಭಾಗಶಃ ಬೈಕ್ ಸುಟ್ಟು ಹೋಗಿದೆ.

ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದುರ್ಗಪ್ಪ ಅವರ ಪುತ್ರ ಶ್ರೀಧರ್ ಒತ್ತಾಯಿಸಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Share This Article
";