ಬೆಂಗಳೂರು,ಅ.24 : ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಗುರುವಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರು. ಇದನ್ನು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಸೆಪ್ಟೆಂಬರ್ 24 ರ ವಜಾಗೊಳಿಸಿತ್ತು.
ಸಿಎಂ ಸಿದ್ದರಾಮಯ್ಯ ಅವರು ಇಂದು ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.