ಮೈಸೂರು,ಫೆ.19 : ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಿದ್ದು, ಎಲ್ಲ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ತಿಳಿಸಿದೆ.
ಲೋಕಾಯುಕ್ತ ಎಸ್ಪಿ ಉದೇಶ್ ಅವರು, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ಇದರಲ್ಲಿ ನೀವು ನೀಡಿದ ದೂರಿನ ಸಂಬಂಧ ಆರೋಪಿಯಿಂದ ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದೂ, ತನಿಕೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆಯಿಂದ ಕೂಡಿದೆ. ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಒಂದು ವಾರದೊಳಗೆ ಸಂಬಂಸಿದ ಮ್ಯಾಜಿಸ್ಟ್ರೇಟ್ ಮುಂದೆ ಆಕ್ಷೇಪಣೆ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಕಾರದಿಂದ 2016 ರಿಂದ 2024 ರವರೆಗೆ 50:50 ಅನುಪಾತದಲ್ಲಿ ಹಂಚಿಕೆ ಆಗಿರುವ ಪರಿಹಾರಾತ್ಮಕ ನಿವೇಶನಗಳ ಆರೋಪದ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಹೆಚ್ಚುವರಿ ಅಂತಿಮ ವರದಿಯನ್ನು ಸಲ್ಲಿಸಲಾಗುವುದು ಎಂದು ನೋಟಿಸ್‌ನಲ್ಲಿ ಮಾಹಿತಿ ನೀಡಿದ್ದಾರೆ.