ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ನಿಧನ

Kranti Deepa
ಶಿವಮೊಗ್ಗ, ಮೇ.13: ಶಿವಮೊಗ್ಗದ ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ  ಎಸ್.ಕೆ. ನಾರಾಯಣಸ್ವಾಮಿ ಅವರು ಇಂದು ಬೆಳಿಗ್ಗೆ ನಂಜಪ್ಪ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಶಿವಮೊಗ್ಗ ನಗರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ್ದ ಹಾಗೂ ನೀಡುತ್ತಿರುವ ಸ್ವಾಮಿ ವಿವೇಕಾನಂದ ಶಿಕ್ಷಣ  ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಆರ್ಕಿಟೆಕ್ಟ್ ಎಸ್ ಕೆ ನಾರಾಯಣಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಂಜಪ್ಪ ಆಸ್ಪತ್ರೆಯಲ್ಲಿಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನವಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ನಾರಾಯಣಸ್ವಾಮಿಯವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಮತ್ತು ಶಿಕ್ಷಣ ಸಂಸ್ಥೆಯ ಅಪಾರ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದವನ್ನು ಬಿಟ್ಟು ಅಗಲಿದ್ದಾರೆ.
ಇಂದು ಬೆಳಿಗ್ಗೆ ಅವರ ಪಾರ್ಥಿವ ಶರೀರವನ್ನು ರವೀಂದ್ರ ನಗರದ ಸ್ವಾಮಿ ವಿವೇಕಾನಂದ ಶಾಲೆಯ ಆವರಣದಲ್ಲಿ ಇಟ್ಟು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಂತರ ಸೋಮಿನಕೊಪ್ಪ ರಸ್ತೆಯ ಶಾರದಮ್ಮ ಲೇಔಟ್ ನಲ್ಲಿರುವ ಪುತ್ರನ ಮನೆಯಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಇಂದು ಸಂಜೆ ರೋಟರಿ ಚಿತ್ತಾಗಾರದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Share This Article
";