ನವದೆಹಲಿ,ಜು.22 : ಎಲ್ಲೆಡೆ ಬರದ ಛಾಯೆ ಆವರಿಸಿದೆ. ಹೀಗಾಗಿ, ಕಾವೇರಿ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರವೇ ಬಳಸಿಕೊಳ್ಳಬೇಕು ಎಂದು ಕರ್ನಾಟಕ ಮತ್ತು ತಮಿಳನಾಡಿಗೆ ‘ಕಾವೇರಿ ನೀರು ನಿರ್ವಹಣಾ ಪ್ರಾಕಾರ’ ಬುಧವಾರ ನಿರ್ದೇಶನ ನೀಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಎಸ್.ಕೆ. ಹಲ್ದಾರ್ ನೇತೃತ್ವದಲ್ಲಿ ಸಭೆ ನಡೆದಿದೆ. ನೀರಿನ ಕೊರತೆ ಎದುರಾಗುವುದನ್ನು ತಪ್ಪಿಸುವ ಸಲುವಾಗಿ, ಕೃಷಿ ಹಾಗೂ ಇತರ ನೀರಾವರಿ ಉದ್ದೇಶಗಳಿಗೆ ಕಾವೇರಿ ನೀರನ್ನು ಬಳಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
