ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗುವಿನ ದಾರುಣ ಸಾವು

Kranti Deepa
ಶಿಕಾರಿಪುರ , ಸೆ. 5: ಮನೆಯಲ್ಲಿ ಆಟವಾಡುವ ವೇಳೆ, ಒಂದೂವರೆ ವರ್ಷದ ಮಗುವೊಂದು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಹರಗುವಳ್ಳಿ ಗ್ರಾಮ ದಲ್ಲಿ ಈ ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಸೆ.4 ರ ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು   ಅದು ಗಂಟಲಲ್ಲಿ ಸಿಲುಕಿ ಬಿದ್ದಿದೆ. ಮುಗುವಿನ ಉಸಿರಾಟದಲ್ಲಿ ಏರುಪೇರಾಗಿದೆ.
ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.

Share This Article
";