ಮಂಗಳೂರು,ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಸಿದಂತೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವಎಂಡಿ ಸಮೀರ್‌ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಸಮೀರ್ ಇದೀಗ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪರಿಶೀಲನೆಯಲ್ಲಿದ್ದು ವಿಚಾರಣೆ ಭೀತಿ ಎದುರಿಸುತ್ತಿದ್ದಾರೆ.
ಈಗಾಗಲೇ ಎಂ.ಡಿ. ಸಮೀರ್‌ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಆಗಸ್ಟ್ 24 ರಂದು ತನಿಖಾಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಅಕಾರಿಗಳು ಶನಿವಾರ ತಿಳಿಸಿದ್ದಾರೆ. ಆಗಸ್ಟ್ 21 ರಂದು ಮಂಗಳೂರು ನ್ಯಾಯಾಲಯವು ಸಮೀರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನಂತರ ಬಳ್ಳಾರಿಯಲ್ಲಿರುವ ಅವರ ನಿವಾಸದಲ್ಲಿ ಅಂಟಿಸಲಾದ ನೋಟಿಸ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.