ತಹಶೀಲ್ದಾರ್ ಕಚೇರಿಯಲ್ಲೇ ಎಸ್ಡಿಸಿ ನೇಣಿಗೆ ಶರಣು

Kranti Deepa

ಬೆಳಗಾವಿ,ನ.04 :ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ ನಾಗರಾಳ ಅವರ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆಯಷ್ಟೆ ರುದ್ರಣ್ಣ ಅವರನ್ನು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ರಾಜಕೀಯ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಾಟ್ಸಪ್ ಗ್ರೂಪ್ ನಲ್ಲಿ ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್, ಸೋಮು ಕಾರಣ ಎಂದು ಬರೆದಿದ್ದಾರೆ.

Share This Article
";