ತುಟ್ಟಿ ಭತ್ಯೆ ಬಿಡುಗಡೆಗೆ ಷಡಾಕ್ಷರಿ ಒತ್ತಾಯ

Kranti Deepa
ಬೆಂಗಳೂರು,ಅ.22 : ರಾಜ್ಯದ ಸರ್ಕಾರಿ ನೌಕರ ರಿಗೆ ಬಾಕಿಯಿರುವ ತುಟ್ಟಿ ಭತ್ಯೆ  ಬಿಡುಗಡೆ ಮಾಡಬೇಕೆಂದು ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಮಂಗಳವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದ ಅವರು ಕೇಂದ್ರ ಸರ್ಕಾರ ಈಗಾಗಲೇ ತನ್ನ ನೌಕರರಿಗೆ ಶೇ.3 ರಷ್ಟು ತುಟ್ಟಿ ಭತ್ಯೆ ಬಿಡುಗಡೆ ಮಾಡಿದೆ.
ಆದ್ದರಿಂದ ರಾಜ್ಯದ ಸರ್ಕಾರಿ ನೌಕರರಿಗೆ ಜುಲೈ೧ರಿಂದ ಅನ್ವಯವಾಗುವಂತೆ ಬಾಕಿ ಇರುವ ಶೇ.3 ರಷ್ಟು ತುಟ್ಟಿ ಭತ್ಯೆ  ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು.

Share This Article
";