ಶಿವಮೊಗ್ಗ ಪ್ರೆಸ್ ಟ್ರಸ್ಟ್: ಜು.31 ರಂದು ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Kranti Deepa
ಶಿವಮೊಗ್ಗ:  ‘ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಜುಲೈ 31 ರಂದು ಬೆಳಿಗ್ಗೆ 10.30 ಕ್ಕೆ ನಗರದ ಆರ್.ಟಿ.ಒ ರಸ್ತೆಯ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿಜಯ ಕರ್ನಾಟಕ ಪತ್ರಿಕೆ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ನೌಕರರ ಸಂಘ ರಾಜ್ಯ ಘಟಕ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅತಿಥಿಯಾಗಿ ಪಾಲ್ಗೊಳ್ಳುವರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್.ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಧಕರಿಗೆ ಸನ್ಮಾನ: ವಾರ್ತಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದ ಬಿ.ಎಸ್.ತಿಮ್ಮೋಳಿ, ತುಂಗಾತರಂಗ ಪತ್ರಿಕೆಯ ಸಂಪಾದಕರಾದ ಎಸ್.ಕೆ.ಗಜೇಂದ್ರ ಸ್ವಾಮಿ, ದಿ ಹಿಂದೂ ಪತ್ರಿಕೆಯ ಛಾಯಾಗ್ರಹಕರಾದ ಎಸ್.ಕೆ.ದಿನೇಶ್, ಹೊಸದಿಂಗಂತ ಪತ್ರಿಯ ಮುದ್ರಣ ವಿಭಾಗದಿಂದ ರಾಘವೇಂದ್ರ, ವಿಜಯ ಕರ್ನಾಟಕ ಪತ್ರಿಕೆ ( ಹಣಕಾಸು ವಿಭಾಗ) ಸಹಯಕ ವ್ಯವಸ್ಥಾಪಕರಾದ ಟಿ.ಸಿ.ಮಂಜುನಾಥ್, ಸುವರ್ಣ ನ್ಯೂಸ್ ಹಿರಿಯ ವರದಿಗಾರರಾದ ರಾಜೇಶ್ ಕಾಮತ್, ನ್ಯೂಸ್ ಫಸ್ಟ್ ಸೀನಿಯರ್ ವಿಡಿಯೋ ಜರ್ನಲಿಸ್ಟ್ ಕೆ.ಎ.ಮಹೇಶ್, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಿನೀಯರ್ ಮ್ಯಾನೇಜರ್ (ಮಾರ್ಕೇಟಿಂಗ್) ಡಿ.ಕೆ.ಕಾರ್ತಿಕ್, ಶಿವಮೊಗ್ಗ ಟೈಮ್ಸ್ ಪತ್ರಿಕೆ ಡಿಸೈನರ್ ಎಸ್.ಪಿ.ಶೋಭಾ, ಪತ್ರಿಕಾ ವಿತರಕ ವಿಭಾಗದ ಡಿ.ಶಿವಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಪತ್ರಕರ್ತರು ಮತ್ತು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿ‌ನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರೆಸ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
";