ಬೆಂಗಳೂರು,ಫೆ.10 : ರಾಜ್ಯ ಬಿಜೆಪಿ ಬಣ ಬಡಿದಾಟ ರಾಯಕೀಯ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಮ್ಮೆ ಬಿಸಿ ಮುಟ್ಟಿಸಲು, ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಮಧ್ಯಪ್ರವೇಶ ಮಾಡಿದೆ. ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ.
ಪಕ್ಷದ ಶಿಸ್ತು ಪಾಲನೆ ಮಾಡದಿರುವ ಬಗ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಯತ್ನಾಳ್, 72 ಗಂಟೆಯೊಳಗೆ ಉತ್ತರಿಸುವಂತೆ ಸಮಿತಿ ಸೂಚನೆ ನೀಡಿದೆ.