ಎಲ್ಲಾ ಸಮುದಾಯಗಳಲ್ಲೂ ಸಾಮಾಜಿಕ ನ್ಯಾಯದ ಅಗತ್ಯವಿದೆ

Kranti Deepa

ಭದ್ರಾವತಿ,03 :  ಸಾಮಾಜಿಕ ನ್ಯಾಯ ಎಂಬುದು ಎಲ್ಲಾ ಸಮುದಾಯಗಳಲ್ಲೂ ಬೇಕು. ಎಲ್ಲರೂ ಸಮಾನ ವಾಗಿ ಬದುಕಿದಾಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಶ ಬಿಲ್ಲಪ್ಪ ಹೇಳಿದರು.

ಅವರು ಭಾನುವಾರ ಹಳೇನಗರದ ಉಪ್ಪಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸ ಲಾಗಿರುವ ಶ್ರೀ ಭಗೀರಥ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.

ಸಮುದಾಯಗಳನ್ನು ಸಂಘಟಿಸುವುದು ಬಹಳ ಕಷ್ಟದ ಕೆಲಸವಾಗಿದ್ದು, ಈ ನಡುವೆ ಸಮು ದಾಯ ಭವನ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಭವಿಷ್ಯದಲ್ಲಿ ಈ ಸಮುದಾಯ ಭವನದ ಮಹತ್ವ ಎಲ್ಲರಿಗೂ ಅರಿವಾಗಲಿದೆ ಎಂದರು.

ಎಲ್ಲಾ ಸಮುದಾಯಗಳಲ್ಲೂ ಸಾಮಾಜಿಕ ನ್ಯಾಯದ ಅಗತ್ಯವಿದೆ. ಎಲ್ಲರೂ ಸಮಾನತೆ ಯಿಂದ ಬದುಕುಬೇಕು. ಉತ್ತಮ ಸಮಾಜ ನಿರ್ಮಿಸಿಕೊಳ್ಳಬೇಕೆಂಬುದು ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆಶಯವಾಗಿದೆ.

ಈ ನಿಟ್ಟಿನಲ್ಲಿ ಅವರು ನಮಗೆ ತೋರಿಸಿಕೊಟ್ಟಿರುವ ೩ ಪ್ರಮುಖ ಮಾರ್ಗಗಳು ಎಂದರೆ ಶಿಕ್ಷಣ, ಸಂಘಟನೆ ಹಾಗು ಹೋರಾಟ.  ಪ್ರತಿಯೊಬ್ಬರು ಶಿಕ್ಷಣವಂತಾಗ ಬೇಕು. ಆ ಮೂಲಕ ಭವಿಷ್ಯದ ಬದುಕು ಕಟ್ಟಿಕೊಳ್ಳಬೇಕು.

ಕೇವಲ ಉನ್ನತ ಹುದ್ದೆ ಪಡೆದುಕೊಂಡರೆ ಸಾಲದು. ಸಮಾಜಮುಖಿ ಬದುಕು ನಮ್ಮದಾಗ ಬೇಕು. ಆಗ ಮಾತ್ರ ನಾವು ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದರು.

ಸಮಾಜದಲ್ಲಿ ಸಂಘಟನೆ ಇಲ್ಲದೆ ಏನನ್ನು ಸಹ ಮಾಡಲು ಸಾಧ್ಯವಿಲ್ಲ. ಸಂಘಟನೆಯಲ್ಲಿ ಬಲ ವಿದೆ. ಇದನ್ನು ನಾವುಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಸಂಘಟನೆ ಮೂಲಕ ಹೋರಾಟ ನಡೆಸಿ ನಮ್ಮ ಹಕ್ಕುಗಳನ್ನು ಪಡೆದು ಕೊಳ್ಳಬೇಕು. ಯಾರು ಸಹ ವೈಯಕ್ತಿಕ ಕಾರಣ ಗಳಿಗೆ ಸಂಘಟನೆಗಳನ್ನು ಬಲಿ ಕೊಡಬಾರದು ಎಂದರು.

ನಗರಸಭೆ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ಬಿ.ಕೆ ಮೋಹನ್ ಮಾತನಾಡಿ, ಸಮಾಜದವರು ತುಂಬಾ ಶ್ರಮಪಟ್ಟು ಸಮುದಾಯ ಭವನವನ್ನು ನಿರ್ಮಿಸಿದ್ದಾರೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘಟನೆಗಳಲ್ಲಿ ಭಿನ್ನಭಿಪ್ರಾಯಗಳು ಸಹಜ ಪ್ರತಿಯೊಬ್ಬರೂ ಸಹ ಎಲ್ಲವನ್ನು ಸಹಿಸಿಕೊಂಡು ಮುಂದೆ ಸಾಗಬೇಕು. ಸಂಘಟನೆಯಲ್ಲಿ ಎಲ್ಲರ ಶ್ರಮ ಮುಖ್ಯವಾಗಿದೆ. ಇಲ್ಲಿ ಯಾರು ಸಹ ದೊಡ್ಡವರು, ಚಿಕ್ಕವರು ಎಂಬುದು ಇಲ್ಲ. ಸಮುದಾಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತಷ್ಟು ಬಲಗೊಳ್ಳಬೇಕು ಎಂದರು.

ಹೊಸದುರ್ಗ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ವಿಧಾನಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಶಿವಮೊಗ್ಗ ಕೇಂದ್ರ ಕಾರಗೃಹ ಮುಖ್ಯ ಅಕ್ಷಕ ಡಾ. ಪಿ. ರಂಗನಾಥ್, ನಿವೃತ್ತ ಕೆಎಎಸ್ ಅಕಾರಿ ಬಿ. ಭೀಮಪ್ಪ, ತೆರಿಗೆ ಇಲಾಖೆ ನಿವೃತ್ತ ಹೆಚ್ಚುವರಿ ಆಯುಕ್ತ ಜಗನ್ನಾಥ್ ಸಗರ, ಉಪ್ಪಾ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಗಿರೀಶ್ ಉಪ್ಪಾರ, ಶ್ರೀ ಭಗೀರಥ  ಸಹಕಾರ ಸಂಘ ಜಿಲ್ಲಾಧ್ಯಕ್ಷ ಎನ್. ಮಂಜುನಾಥ್, ನಗರಸಭೆ ಸದಸ್ಯರಾದ ಬಿ.ಎಂ ಮಂಜುನಾಥ್, ಅನುಪಮ ಚನ್ನೇಶ್, ಯುವ ಮುಖಂಡ ಬಿ.ಎಸ್ ಗಣೇಶ್ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರಮುಖರರಾದ ರವೀಶ್, ರಾಜಶೇಖರ್ ಉಪ್ಪಾರ, ಶ್ರೀನಿವಾಸ್(ಪೋಟೋ ಗ್ರಾಫರ್), ಕುಮಾರ್, ರಾಮು ಸೇರಿದಂತೆ ತಾಲೂಕು ಸಂಘದ ಪದಾಕಾರಿಗಳು, ಇನ್ನಿತರ ಸಮಾಜದ ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.

Share This Article
";