ಜು. 25: ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

Kranti Deepa

ಶಿವಮೊಗ್ಗ, ಜು. 19: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587 /06588 ) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.

ರೈಲು ಸಂಖ್ಯೆ 06587  ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25,2025  ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ತುಮಕೂರು , ತಿಪಟೂರು ಅರಸೀಕೆರೆ ಬೀರೂರು ತರೀಕೆರೆ , ಭದ್ರಾವತಿ ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ವಾಪಸ್ ಬರುವಾಗ, ರೈಲು ಸಂಖ್ಯೆ 06588  ತಾಳಗುಪ್ಪ- ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 26,2025 ರಂದು ಬೆಳಿಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ಸಾಗರ ಜಂಬಗಾರು , ಆನಂದಪುರಂ , ಶಿವಮೊಗ್ಗ ಟೌನ್ , ಭದ್ರಾವತಿ , ತರೀಕೆರೆ , ಬೀರೂರು , ಅರಸೀಕೆರೆ , ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 01 ಎಸಿ ಟು ಟೈರ್, 02 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

Share This Article
";