ಮಾರ್ಚ್ 7ಕ್ಕೆ ರಾಜ್ಯ ಬಜೆಟ್

Kranti Deepa
ಬೆಂಗಳೂರು,ಫೆ .04 : ಮಾರ್ಚ್ 7 ರಂದು ರಾಜ್ಯ ಬಜೆಟ್  ಮಂಡನೆಯಾಗುವ ಸಾಧ್ಯತೆ ಇದೆ.ಫೆ.6 ಗುರುವಾರದಂದು ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆ ಆರಂಭಿಸಲಿದ್ದಾರೆ. ಫೆಬ್ರವರಿ 6 ರಿಂದ 14 ರ ತನಕ ಬಜೆಟ್ ಪೂರ್ವಭಾವಿ ಚರ್ಚೆ ನಿಗದಿಯಾಗಿದ್ದು, ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತ ಬಜೆಟ್ ಸಿದ್ಧತಾ ಸಭೆ ನಡೆಯಲಿದೆ.
ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅವೇಶನ ನಡೆಸಲು ಸರ್ಕಾರದ ಸಿದ್ಧತೆ ನಡೆಸಿದೆ. ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಅವೇಶನವನ್ನುದ್ದೇಶಿಸಿ ಭಾಷಣ ಸಾಧ್ಯತೆ ಇದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಬಜೆಟ್ ದಿನಾಂಕ, ಜಂಟಿ ಅವೇಶನ ದಿನಾಂಕ ಅಂತಿಮಗೊಳಿಸಲಿರುವ ಸರ್ಕಾರ ಅಕೃತ ಘೋಷಣೆ ಮಾಡಲಿದೆ.
ಎರಡು ದಿನಗಳ ಹಿಂದಷ್ಟೇ ಮಂಡಿ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಎರಡು ದಿನ ಸಿಎಂ ಅವರ ಎಲ್ಲಾ ಕಾರ್ಯಕ್ರಮ ಗಳನ್ನು ರದ್ದು ಮಾಡಲಾಗಿತ್ತು.

Share This Article
";