ಎಸ್‌.ಎಂ.ಕೃಷ್ಣ ನಿಧನ: ನಾಳೆ ರಾಜ್ಯಾದ್ಯಂತ ರಜೆ ಘೋಷಣೆ

Kranti Deepa

ಬೆಂಗಳೂರು,ಡಿ.10 : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪುಕಟಿಸಿದೆ.

ದಿವಂಗತರ ಅಂತ್ಯಕ್ರಿಯೆಯನ್ನು 11.12.2024 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.

ದಿವಂಗತರ ಗೌರವಾರ್ಥವಾಗಿ ದಿನಾಂಕ 11 ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ದಿನಾಂಕ 10 ರಿಂದ ದಿನಾಂಕ 12 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ನಿರ್ಧರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

Share This Article
";