ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಗಣಂದೂರು ಗ್ರಾಮದ ಪುಟ್ಟನಾಯ್ಕ್ ( 80 ) ಮೃತ ರು.
ಮೃತ ಪುಟ್ಟನಾಯ್ಕ್ ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೆ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ.
ಇವರಿಗೆ ಕೃಷ್ಣ ಪ್ರಗತಿ ಗ್ರಾಮೀಣ ಬ್ಯಾಂಕ್ ಹೊಸನಗರ 13 ಲಕ್ಷ , ತೋಟಗಾರ್ಸ್ ಅಡಿಕೆ ಮಂಡಳಿ ಸಾಗರ 2.5 ಲಕ್ಷ , ಪಿಎಲ್ ಡಿ ಬ್ಯಾಂಕ್ 2.5 ಲಕ್ಷ ಸಾಲವಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಮೂರು ಗಂಡು ಹಾಗೂ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.