ಪ್ರಧಾನಿ ನನ್ನ ಸವಾಲು ಸ್ವೀಕರಿಸಿಲ್ಲ

Kranti Deepa

ಸಂಡೂರು,ಡಿ.08 : ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್‌ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತಿಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯ ವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದರು.

ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

Share This Article
";