ಸಾಹಿತ್ಯ ಸಮ್ಮೇಳನ: ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

Kranti Deepa

ಮಂಡ್ಯ,ಡಿ.18 :87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಸಿರುವುದನ್ನು ವಿರೋಸಿ ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನ ದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸು ತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ ಮಾಂಸಾ ಹಾರಕ್ಕೆ ಪ್ರಾತಿನಿಧ್ಯವಿರುಬೇಕೆಂಬುದು ನಮ್ಮ ಉದ್ದೇಶ. ತಂಬಾಕು, ಮದ್ಯಪಾನ ಹಾಗೂ ಮಾಂಸಾಹಾರ ನಿಷೇಸಲಾಗಿದೆ ಎಂಬ ನಿಬಂಧನೆಯನ್ನು ಖಂಡಿಸಿಯೇ ಇದು ಪ್ರಾರಂಭವಾಗಿದ್ದು ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ ಕಾಣುತ್ತಿರುವುದನ್ನು ಹೋಗಲಾಡಿಸುವ ಹಾಗೂ ಆಹಾರದಲ್ಲಿ ಸಮಾನತೆ ತರುವ ಪ್ರಯತ್ನ ನಮ್ಮದು. ಸಾರ್ವಜನಿಕರ ಹಣ ವನ್ನು ಸಮ್ಮೇಳನದಲ್ಲಿ ಬಳಸುತ್ತಿದ್ದು, ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡಲು ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದರು.

ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಸಮ್ಮೇಳನಕ್ಕೆ ಹಾಕಿರುವ ಬ್ರಾಹ್ಮಣ್ಯದ ಜನಿವಾರವನ್ನು ಬಾಡೂಟದ ಮೂಲಕ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಸಾಮಾಜಿಕ ಕಾರ್ಯಕರ್ತ ಸಂತೋಷ್ ಮಾತನಾಡಿದರು. ಲಕ್ಷ್ಮಣ್ ಚೀರನಹಳ್ಳಿ, ಸಿ. ಕುಮಾರಿ, ಶಿವಶಂಕರ್, ಧನುಷ್, ಮನು ಇದ್ದರು.

Share This Article
";