ಚೆನ್ನೈ,ಜು.22 : ನೀಟ್ ಪರೀಕ್ಷೆ ವಿಚಾರದಲ್ಲಿ ಸರ್ಕಾರವು ವಿದ್ಯಾರ್ಥಿಗಳು ಹಾಗೂ ಜನರ ಭಾವನೆಗಳನ್ನು ಗೌರವಿಸಬೇಕು. ಇಲ್ಲದಿದ್ದರೆ, ಆ ಪರೀಕ್ಷೆನ್ನೇ ರದ್ದು ಮಾಡಬೇಕು. ಸಮಸ್ಯೆಗಳಿಗೆ ಇರುವ ಪರಿಹಾರ ಅದೊಂದೇ ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ಸಿ. ವಿಜಯ್ ಹೇಳಿದ್ದಾರೆ.
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ವಿರೋಧ ಪಕ್ಷದ ನಾಯಕರು ಸಂಸತ್ತಿನ ಹೊರಗೆ ಕಪ್ಪು ಬಟ್ಟೆ ಧರಿಸಿ ನಡೆಸಿರುವ ಪ್ರತಿಭಟನೆ ವಿಚಾರವಾಗಿ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.
