ಬೆಂಗಳೂರು,ಆ.21: ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಸಹ ನಿರಂತರ ಮಳೆಯಾಗಿದ್ದು ಬೆಳೆಗಳಿಗೆ ಹಾನಿಯಾ ಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿವೆ. ಇನ್ನು ಪ್ರಮುಖ ಜಲಾಶಯಗಳು ಪೂರ್ಣ ಸಾಮ ರ್ಥ್ಯದ ಸಮೀಪಿಸುತ್ತಿದ್ದರೂ, ಮುನ್ನೆಚ್ಚರಿಕೆಯಾಗಿ ಜನರನ್ನು ಸ್ಥಳಾಂತರಿಸಲಾಯಿತು. ಧಾರವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮನೆಗಳು ಮತ್ತು ಕೃಷಿಭೂಮಿಗೆ ಹಾನಿಯಾಗಿದೆ. ಮುನ್ನೆಚ್ಚರಿಕೆಯಾಗಿ ಕೆಲವು ಪ್ರದೇಶಗಳಲ್ಲಿ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾ ಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಿಂದ ಹರಿಯುತ್ತಿರುವ ನೀರಿನ ಪ್ರಮಾಣದಿಂದ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ನಾರಾಯಣಪುರ ಜಲಾಶಯದಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದು ಹೀಗಾಗಿ ಶೀಲಹಳ್ಳಿ ಸೇತುವೆ ಮುಳುಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ನದಿ ದಂಡೆಯ ಉದ್ದಕ್ಕೂ ಇರುವ ಹಳ್ಳಿಗಳು ಈಗ ಪ್ರವಾಹದ ಭೀತಿಯಲ್ಲಿವೆ. ಶೀಲಹಳ್ಳಿ ಹಂಚಿನಾಳ ಸೇತುವೆ ಮುಳುಗಿರುವುದರಿಂದ ಕದ್ದರಗಡ್ಡಿ, ಯರಿಗೋಡಿ ಮತ್ತು ಹಂಚಿನಾಳ ಸೇರಿದಂತೆ ನದಿ ದಂಡೆಯ ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗ್ರಾಮ ಸ್ಥರು ಈಗ ಜಲದುರ್ಗ ಮೂಲಕ 45 ಕಿ.ಮೀ ಪರ್ಯಾಯ ಮಾರ್ಗವನ್ನು ತೆಗೆದುಕೊಂಡು ತಾಲ್ಲೂಕು ಕೇಂದ್ರ ಕಚೇರಿಯನ್ನು ತಲುಪಬೇಕಾ ಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.