ಬೆಂಗಳೂರು,ನ.26 :ಸಂವಿಧಾನ ವಿರೋಧಿಗಳು ಅದನ್ನು ಬದಲಾಯಿಸುವ ಮಾತುಗಳನ್ನಾಡುತ್ತಿದ್ದರೆ, ಆದರೆ ನಮ್ಮ ಪಕ್ಷ ಅದರ ರಕ್ಷಣೆಗಾಗಿ ಹೋರಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75 ನೇ ವರ್ಷದ ಸಂವಿಧಾನ ದಿನಾಚರಣೆ ಹಾಗೂ ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರ ವಿತರಿಸಿದ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ.
ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾ ಳ್ಕರ್, ಆರ್.ಎಸ್.ಎಸ್ ವಿರೋಸಿದ್ದರು. ಸಂವಿ ಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ ಎಂದರು.
ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಹೇಳಿದ್ದರು. ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದು ಕೊಳ್ಳಬೇಕು ಎಂದು ಕರೆ ನೀಡಿದರು.
ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು. ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ಅವರು ನೀಡಿದ್ದರು. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದರು. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಸುವವರ ಕೈಗೆ ಅಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವವನ್ನು ಪಾಲಿಸುವುದೇ ಆಗಿದೆ. ಸಂವಿಧಾನದದಿಂದಲೇ ನಾನು 2 ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದು, ಜನಾಶೀರ್ವಾದ ಇರುವವರಿಗೂ ಯಾರಿಗೂ ಜಗ್ಗಲ್ಲ, ಬಗ್ಗಲ್ಲ ಎಂದು ಹೇಳುವ ಮೂಲಕ ರಾಜೀನಾಮೆ ಕೇಳುತ್ತಿರುವ ವಿಪಕ್ಷಗಳಿಗೆ ಕಠಿಣ ಸಂದೇಶ ರವಾನಿಸಿದರು.
ಸಚಿವರೆ ಸ್ಥಾನ ತ್ಯಾಗಕ್ಕೆ ಸಿದ್ದರಾಗಿ :
ಆಡಳಿತಾತ್ಮಕ ಹಿತದೃಷ್ಟಿಯಿಂದ ಕೆಲವು ಸಚಿವರನ್ನ ಸಂಪುಟದಿಂದ ಕೈ ಬಿಡಬೇಕಾಗುತ್ತದೆ ಆದ್ದರಿಂದ ಕೆಲವು ಮಂತ್ರಿಗಳು ಅಕಾರ ತ್ಯಾಗಕ್ಕೆ ಸಿದ್ಧರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಚುನಾವಣೆಯಿಂದ ಪಕ್ಷ ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠಗೊಂಡಿದೆ ಸರ್ಕಾರಕ್ಕೆ ಬಲಬಂದಂತಾಗಿದೆ ರಾಜ್ಯದ ಜನತೆಗೆ ಮತ್ತಷ್ಟು ಜನಪರ ಆಡಳಿತವನ್ನು ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಈ ಹಿನ್ನೆಲೆಯಲ್ಲಿ ಮಂತ್ರಿಮಂಡಳದ ಪುನರ್ ರಚನೆ ಅಗತ್ಯ ಎಂದು ಹೇಳಿದರು.
ಇಷ್ಟು ವರ್ಷದ ಅವಧಿಯಲ್ಲಿ ತಮ್ಮ ಖಾತೆಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು ಸಂಪೂರ್ಣದಿಂದ ಕೈ ಬಿಡುವುದು ಅನಿವಾರ್ಯ ವಾಗಿದೆ ಎಂದವರು ಮುಂದಿನ ದಿನಗಳಲ್ಲಿ ಸಮರ್ಥ ವ್ಯಕ್ತಿಗಳಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗುವುದು. ಮಂತ್ರಿಗಿರಿ ಶಾಸಕರಿಗೂ ನಿಗಮ ಮಂಡಳಿಗಳಲ್ಲಿ ಉನ್ನತ ಸ್ಥಾನ ಕಲ್ಪಿಸಲಾಗುವುದು ಎಂದರು.