ಜೂ.03 ರ ದಿನಾಂಕ ನಿಗದಿಗೆ ಎರಡು ಕಾರಣ

Kranti Deepa
ಬೆಂಗಳೂರು,ಮೇ .30 : ಕಾಂಗ್ರೆಸ್ ಸರ್ಕಾರ ಅಕಾರಕ್ಕೆ ಬಂದು ಮೂರು ವರ್ಷಗಳ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೂನ್ 03 ರಂದು ಸಂಜೆ 4.10 ಕ್ಕೆ ಅವರು ಪದಗ್ರಹಣ ಮಾಡಲಿದ್ದಾರೆ.
ಎರಡು ಕಾರಣಗಳಿಂದ ಡಿ.ಕೆ. ಶಿವಕುಮಾರ್ ಅವರು ಜೂನ್ 03 ರಂದೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಅಂದು ಸಂಜೆ 4.10 ಕ್ಕೆ ಶುಭ ಮುಹೂರ್ತವಿರುವುದರಿಂದ ಅದೇ ಘಳಿಗೆಯಲ್ಲಿ ಪ್ರಮಾಣ ವಚನಕ್ಕೆ ಜ್ಯೋತಿಷಿ ದ್ವಾರಕಾನಾಥ್ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ಆ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಲಭ್ಯವಿರಲಿದ್ದು, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷವು ಹೊಸ ಸರ್ಕಾರದಲ್ಲಿ ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಹಾಗೂ ಪಕ್ಷದ ಬಣಗಳ ನಡುವೆ ಸಮತೋಲನ ಸಾಸುವ ಸಾಧ್ಯತೆಯಿದೆ. ಹೊಸ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಖಾತೆ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ರೂಪರೇಷೆಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ. ಹೊಸ ಸಂಪುಟದಲ್ಲಿ ದಲಿತರು, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ಗಾಂಧಿ ಬಯಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
* ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿಯಾಗಿ ಪ್ರಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಅಥವಾ ಯು.ಟಿ. ಖಾದರ್ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
* ಮುಖ್ಯಮಂತ್ರಿಗಳೊಂದಿಗೆ ಎಷ್ಟುಜನ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬುದು ಇನ್ನೂ ನಿಗಧಿಯಾಗಿಲ್ಲ. 
* ಮೂಲಗಳ ಪ್ರಕಾರ 14 ಹಾಲಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
* ಮಂತ್ರಿಗಿರಿಗಾಗಿ ಸಾಕಷ್ಟು ಲಾಭಿ ನಡೆಯುತ್ತಿದ್ದು, 12  ರಿಂದ 15 ಹೊಸಬರಿಗೆ ಮಂತ್ರಿ ಮಂಡಲ ದಲ್ಲಿ ಅವಕಾಶ ದೊರೆಯುವ ಸಾಧ್ಯತೆ ಇದೆ.

Share This Article
";