ಪೆಟ್ರೋಲ್, ಡೀಸೆಲ್ ಸಾಕಷ್ಟು ದಾಸ್ತಾನು ಇದೆ

Kranti Deepa
ನವದೆಹಲಿ,ಮೇ.09 : ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಾಕಷ್ಟು ದಾಸ್ತಾನು ಇದೆ, ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ ಎಂದು ತೈಲ ಕಂಪನಿಗಳು ಶುಕ್ರವಾರ ತಿಳಿಸಿವೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಈ ಬಗ್ಗೆ ಪ್ರತ್ಯೇಕ ಪ್ರಕಟಣೆ ಹೊರಡಿಸಿದ್ದು, ಸಾಕಷ್ಟು ಸ್ಟಾಕ್ ಲಭ್ಯತೆ ಮತ್ತು ಸುಗಮ ಕಾರ್ಯಾಚರಣೆಯ ಭರವಸೆ ನೀಡಿವೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾದಂತೆ ಜನರು ಇಂಧನ ಸಂಗ್ರಹಿಸಲು ಪೆಟ್ರೋಲ್ ಪಂಪ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಕಂಪನಿಗಳು ಪ್ರಕಟಣೆ ಹೊರಡಿಸಿವೆ.

Share This Article
";