ಗಾಂಜಾ ಮಾರುತ್ತಿದ್ದ ಇಬ್ಬರು ಸೆರೆ

Kranti Deepa

ಶಿವಮೊಗ್ಗ,ಅ.25: ನಗರದ ಕುವೆಂಪು ನಗರದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಗ್ರಾಮಾಂತರ ಸಿಪಿಐ ಸತ್ಯನಾರಾಯಣ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ.

ಬಸವನಗುಡಿಯ ಭರತ್ ಟಿ ಅಲಿಯಾಸ್ ಜಾನ್ ಭರತ್ ( 27 ) ಮತ್ತು ರಾಗಿಗುಡ್ಡದ ನರಸಿಂಹ ಎಸ್ ಅಲಿಯಾಸ್ ದಾಸ (39 ) ಅವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ  ಅಂದಾಜು ಮೌಲ್ಯ 28,000 ರೂಗಳ 668  ಗ್ರಾಂ ತೂಕದ ಒಣ ಗಾಂಜಾ ಮತ್ತು ರೂ 400 ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Share This Article
";