ಶಿವಮೊಗ್ಗ,ಡಿ.30 : ಸಾಗರ ತಾಲ್ಲೂಕು ಆನಂದಪುರ ಸಮೀಪದ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತರು ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್ ಹಾಗೂ ಶರಣ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು.
ಇಲ್ಲಿನ ಮುರುಘಾಮಠದ ಕ್ರಾಸ್ ಸಮೀಪ ಈ ಅಪಘಾತ ಸಂಭವಿಸಿದೆ. ಇವರಿದ್ದ ಎರ್ಟಿಗಾ ಕಾರು ಧರ್ಮಸ್ಥಳಕ್ಕೆ ಹೋಗುವ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿ ಪುಡಿಪುಡಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತ್ತಿದ್ದಾರೆ.