ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ

Kranti Deepa

ತಿರುಪತಿ,ಸೆ.19 :ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾ ಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಕಾರಿಗಳು ವಾದಿಸಿದ್ದರು.

ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು.

ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಕೃತ ಸ್ಪಷ್ಟನೆ ನೀಡಲಾಗಿದೆ. ಲ್ಯಾಬ್ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ. ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.

Share This Article
";