ಶಿವಮೊಗ್ಗ,ಆ.22 : ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ.ಆಗಸ್ಟ್ 15 ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವ್ಹೀಲಿಂಗ್ ಮಾಡಿದ್ದ. ಈತ ಬೈಕ್ ಸ್ಟಂಟ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ ದಂಡ ವಿಧಿಸಿದ್ದಾರೆ.
ದುಬಾರಿ ಬೆಲೆ ಕವಾಸಕಿ ಬೈಕ್ ಸವಾರನಿಗೆ ೫೦೦೦ ದಂಡ ವಿಧಿಸಿದ್ದಾರೆ. ಅಲ್ಲದೆ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ. ಇನ್ನು ಮುಂದೆ ಯಾರೂ ಈ ರೀತಿಯ ತಪ್ಪು ಮಾಡಬಾರದು ಎಂದು ಆತ ವಿಡಿಯೋದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.ಪ್ರಕರಣ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.